Karnataka NewsLatestPolitics

*ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ*: *FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಮತ್ತೊಂದು ಎಫ್ಐಆರ್​ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ FIR ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಗಂಭೀರ ಆರೋಪ ಅವರ ಮೇಲಿದೆ.

ಸಂತ್ರಸ್ತೆಯು ಈ ಹಿಂದೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆ ಸಂತ್ರಸ್ತೆಯ ಗುರುತು ತಿಳಿಯುವಂತೆ ಬಹಿರಂಗವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸಂತ್ರಸ್ತೆಯ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ, ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ನಮೂದಿಸಲಾಗಿದೆ.

ಈ ಸಂಬಂಧ ಬಿಎನ್ಎಸ್ ಸೆಕ್ಷನ್ 72 ಮತ್ತು 351 ಕ್ಲಾಸ್ ಎರಡರ ಅಡಿಯಲ್ಲಿ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹೊಸ FIR ನಿಂದ ಶಾಸಕ ಮುನಿರತ್ನ ಅವರು ಮತ್ತಷ್ಟು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕವಾಗಿ ಸಂತ್ರಸ್ತರ ಗುರುತು ಬಹಿರಂಗಪಡಿಸುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈ ಪ್ರಕರಣದ ತನಿಖೆ ಮುಂದುವರಿದಿದೆ.


Related Articles

Back to top button