Belagavi NewsBelgaum NewsKannada NewsKarnataka News

*ಲೋಕಾಯುಕ್ತ ಬಲೆಗೆ ಬಿದ್ದ ಹುಕ್ಕೇರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಸಿಯೂಟ ಯೋಜನೆಯ ಹಿಂದಿನ ಅವಧಿಯ ಕ್ಯಾಶ್ ಬುಕ್ ಸರಿಪಡಿಸಿಕೊಡಲು ಶಿಕ್ಷಕರೊಬ್ಬರಿಂದ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಹುಕ್ಕೇರಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಶಿಪ್ಪೂರ ಹೈಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಪಿ.ಎಂ. ಹೆಜ್ಜೆ ಅವರು ಪ್ರಸ್ತುತ ಬೆಳಗಾವಿ ತಾಲೂಕಿನ ಮುತ್ನಾಳ ಹೈಸ್ಕೂಲ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಸಿಯೂಟ ಯೋಜನೆಯ ಹಿಂದಿನ ಅವಧಿಯ ಕ್ಯಾಶ್ ಬುಕ್ ಸರಿಪಡಿಸಿಕೊಡುವಂತೆ ಅವರು ಮನವಿ ಮಾಡಿದ್ದರು. ಈ ಕೆಲಸ ಮಾಡಿಕೊಡಲು ಸಹಾಯಕ ನಿರ್ದೇಶಕಿ ₹15 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಕರಿಂದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸವಿತಾ ಹಲಕಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ ವೆಂಕಟೇಶ ಯಡಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯ ಆರೋಪಿತ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

ಈ ಲೋಕಾಯುಕ್ತ ದಾಳಿಯಿಂದ ಹುಕ್ಕೇರಿ ತಾಲೂಕು ಪಂಚಾಯಿತಿ ವಲಯದಲ್ಲಿ ಸಂಚಲನ ಮೂಡಿದೆ.

Related Articles

Back to top button