Belagavi NewsBelgaum NewsCrimeLatest

*ಬೆಳಗಾವಿಯಲ್ಲಿ ಸಿಸಿಬಿ ಪೊಲೀಸರ ಅತೀ ದೊಡ್ಡ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, ಸುಮಾರು ₹1 ಲಕ್ಷ ಮೌಲ್ಯದ ಗಾಂಜಾ ಹಾಗೂ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.

ನವೆಂಬರ್ 26ರಂದು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ನಗರದ ಇಂಡಸ್ಟ್ರಿಯಲ್ ಏರಿಯಾ, ಆಟೋ ನಗರದಲ್ಲಿರುವ ಲಕ್ಷ್ಮೀ ಸ್ಟೀಲ್ ಮಿಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಶಿವಾನಂದ ಅಲಿಯಾಸ್ ಪರಶ್ಯಾ ಸುಕನ್ನವರ (23), ನಾಗರಾಜ ರಾಮಚಂದ್ರ ಭೋವಿವಡ್ಡರ (24) ಹಾಗೂ ಲವನ್ ಕೊಂಡಪ್ಪ ಕಾಡಬಾಳ (26) ಎಂದು ಗುರುತಿಸಲಾಗಿದೆ. ಇವರು ಹಿಡಕಲ್ ಡ್ಯಾಂ ವ್ಯಾಪ್ತಿಯ ನಿವಾಸಿಗಳಾಗಿದ್ದಾರೆ.

ಆರೋಪಿಗಳು ಹೀರೋ ಪ್ಲೆಷರ್ ಬೈಕ್‌ನಲ್ಲಿ 2.120 ಕೆ.ಜಿ ಗಾಂಜಾವನ್ನು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರೆಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ ಗಾಂಜಾ ಹಾಗೂ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬೆಳಗಾವಿ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 20(ಬ)(ii)(ಬಿ) ಅಡಿಯಲ್ಲಿ ಪ್ರಕರಣ ಸಂಖ್ಯೆ 257/2026 ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಲಾಗಿದೆ.

Related Articles

Back to top button