Belagavi NewsBelgaum NewsCrimeKannada NewsKarnataka News

*ಬೆಳಗಾವಿಯಲ್ಲಿ ಜೂಜಾಟ ಅಡ್ಡೆಗಳ ಮೇಲೆ ಪೊಲೀಸರ ದಾಳಿ*; *13 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಕ್ರಮ ಜೂಜಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 13 ಜನರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ₹21,640 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ಜನರ ಬಂಧನ

ನ. 25ರಂದು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ನಗರದ 7ನೇ ಕ್ರಾಸ್ ಸಮೀಪ ಜೂಜಾಟ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಅಮೀರ್‌ಖಾನ್ ಕಿತ್ತೂರು (32), ಸಾದಿಕ್ ಫಾರುಖ್ (19), ಸಾಹಿದ್ ಮುಲ್ಲಾ (23), ಮೊಹಮ್ಮದ್ ರಾಜಾ (25) ಹಾಗೂ ಸಿಕಂದರ್ ದಾದಾವಾಳೆ (23) ಎಂಬ ಐವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ₹7,300 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 8 ಜನರ ಬಂಧನ

ಇನ್ನೊಂದು ಪ್ರಕರಣದಲ್ಲಿ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಕಾಂಬಾ ಗ್ರಾಮದ ಹದ್ದಿಯ ಸಮೀಪದ ಜಮೀನಿನಲ್ಲಿ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಕೃಷ್ಣ ಮಾರುತಿ ಪಾಟೀಲ (30), ಆನಂದ ಮಲ್ಲಪ್ಪ ಸಿಗರ (38), ಮಂಜುನಾಥ ಕರೇಪ್ಪ ತಳವಾರ (30), ಮಹೇಶ ಲಕ್ಷ್ಮಣ ಮೋದಗೆ (38), ಬಸವರಾಜ ಯಲ್ಲಪ್ಪ ಬುಡ್ಡಿ (30), ಕಿರಣಪ್ಪ ಪರಶುರಾಮ ಜೀರಗಾಡ (31), ಪ್ರವೀಣ ಯಲ್ಲಪ್ಪ ನಾಯಕ್ (27) ಹಾಗೂ ವಿನಾಯಕ ಶಿವಾಜಿ ಕೊಳಿಗಾರ (31) ಎಂಬ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ₹14,340 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ 14 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾರ್ಕೆಟ್ ಹಾಗೂ ಮಾರಿಹಾಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Related Articles

Back to top button