Film & EntertainmentKannada NewsKarnataka NewsLatest

*ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಮಹತ್ವದ ತೀರ್ಪು*: *ಐವರ ಜಾಮೀನು ರದ್ದುಗೊಳಿಸುವ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಐವರು ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಐವರು ಆರೋಪಿಗಳಿಗೆ ಮಹತ್ವದ ರಿಲೀಫ್ ಸಿಕ್ಕಂತಾಗಿದೆ.

ಎ3 ಪವನ್, ಎ5 ನಂದೀಶ್, ಎ9 ಧನರಾಜ್, ಎ10 ವಿನಯ್ ಮತ್ತು ಎ4 ರಾಘವೇಂದ್ರ ಅವರ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಈ ಹಿಂದೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಐವರು ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಮನವಿ ಮಾಡಿತ್ತು.

ಈ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ವಿನೋದ್ ಚಂದ್ರನ್ ಅವರ ಪೀಠ, ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಹೀಗಾಗಿ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಐವರು ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂಬ ಪ್ರಾಸಿಕ್ಯೂಷನ್ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.

Related Articles

Back to top button