ಚಾಲೇಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್‍ ಅನಾರೋಗ್ಯದ ಹಿನ್ನಲೆಯಲ್ಲಿ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಾಗಿದ್ದಾರೆ.

ದರ್ಶನ್ ಇಂದು ಮುಂಜಾನೆ 4 ಗಂಟೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷಿಯಾ ಆಸ್ಪತ್ರೆ ಸ್ಪೇಷಲ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ದರ್ಶನ್ ಗೆ ಗ್ರಾಸ್ಟ್ರಿಕ್ ಪರಿಣಾಮ ತೀವ್ರ ಥರವಾದ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ದರ್ಶನ್ ಅವರಿಗೆ ಒಂದು ದಿನ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿರುವ ಹಿನ್ನಲೆಯಲ್ಲಿ ಇಂದು ಆಸ್ಪತ್ರೆಯಲ್ಲೇ ಉಳಿದಿದ್ದಾರೆ.

 

Related Articles

Back to top button