*ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ*: *ಗ್ರಾಹಕರಂತೆ ಹೋಗಿ ಮಾಲೀಕ ಸೇರಿ 15 ಆರೋಪಿಗಳನ್ನು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಸ್ಪಾ ಮತ್ತು ಮಸಾಜ್ ಸೆಂಟರ್‌ಗಳ ಹೆಸರಿನಲ್ಲಿ ವೇಶ್ಯಾವಾಅಟಿಕೆ ದಂಧೆ ನಡೆಸುತ್ತಿದ್ದ ಸೆಂಟರ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 29 ಮಹಿಳೆಯರನ್ನು ರಕ್ಷಿಸಿರುವ ಘಟನೆ ನಡೆದಿದೆ.
ಸ್ಪಾ ಹೆಸರಲ್ಲಿ ದಂಧೆ ನಡೆಸುತ್ತಿದ್ದ ನಾಲ್ಕು ಸ್ಪಾಗಳ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಮುಖ ಆರೋಪಿಗಳನ್ನು ಬಂಧಿಸಿ, 29 ಮಹಿಳೆಯರನ್ನು ರಕ್ಷಿಸಿದ್ದಾರೆ.
ಪೊಲೀಸರು ತಿಳಿಸಿರುವ ಪ್ರಕಾರ, ದೆಹಲಿ ಕೇಂದ್ರ ಭಾಗದಲ್ಲಿ ಸ್ಪಾ ಹಾಗೂ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ರಹಸ್ಯ ಮಾಹಿತಿದಾರರು ತಿಳಿಸಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಪಹರ್‌ಗಂಜ್, ನಬಿ ಕರೀಮ್ ಮತ್ತು ಕರೋಲ್ ಬಾಗ್‌ನಲ್ಲಿರುವ 4 ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಆಯಾಭಾಗದ ಠಾಣೆಗಳಿಂದ ಪ್ರತ್ಯೇಕ ತಂದಗಳನ್ನು ರಚಿಸಲಾಗಿತ್ತು. ಮಾಹಿತಿ ಆಧರಿಸಿ ದಾಳಿ ನಡೆಸುವ ಮುನ್ನ ಪೊಲೀಸರು ಮಫ್ತಿಯಲ್ಲಿ ಗ್ರಾಹಕರಂತೆ ತೆರಳಿದ್ದರು. ಮಾಹಿತಿ ಖಚಿತವಾಗುತ್ತಿದ್ದಂತೆ ಪೊಲೀಸರು ದಾಳಿ ನಡೆಸಿದ್ದರು.
ದಾಳಿ ವೇಳೆ ಸ್ಪಾ ಮಾಲೀಕರು, ವ್ಯವಸ್ಥಾಪಕರು ಮತ್ತು ಗ್ರಾಹಕರು ಸೇರಿದಂತೆ 15 ಜನರನ್ನು ಬಂಧಿಸಲಾಗಿದೆ. 4 ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.




