ಭಾವಿ ಪತ್ನಿಗೆ ನಿಖಿಲ್ ಭಾವನಾತ್ಮಕ ಸಂದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಏ.17ರಂದು ರೇವತಿ ಜತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ನಿಖಿಲ್ ತಮ್ಮ ಭಾವಿ ಪತ್ನಿ ರೇವತಿ ಅವರಿಗೆ ಭಾವನಾತ್ಮಕ ಸಂದೇಶವೊಂದನ್ನು ಕಳುಹಿಸಿದ್ದಾರೆ.

ನಿಖಿಲ್-ರೇವತಿ ನಿಶ್ಚಿತಾರ್ಥದ ಬಳಿಕ ಜೊತೆ ಜೊತೆಯಾಗಿ ಓಡಾದುತ್ತಿದ್ದು, ನಿಖಿಲ್ ತಮ್ಮ ಭಾವಿ ಪತ್ನಿ ರೇವತಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು, ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಜೊತೆಗೆ ಆ ಫೋಟೋಗೆ ರೊಮ್ಯಾಂಟಿಕ್ ಕ್ಯಾಪ್ಶನ್ ಕೊಡುತ್ತಿದ್ದಾರೆ.

ಇದೀಗ ಮತ್ತೊಂದು ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ನಿಖಿಲ್, “ನನ್ನ ಕೈಯನ್ನು ಹಿಡಿದುಕೊಳ್ಳಿ ಮತ್ತು ನಾನು ಆ ಕೈಯನ್ನು ಎಂದಿಗೂ ಬಿಡುವುದಿಲ್ಲ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ನಿಖಿಲ್ ಹಾಗೂ ರೇವತಿ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button