ಹೋಳಿ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಸಂದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ದೇಶಾದ್ಯಂತ ಹೋಳಿ ಹಬ್ಬ ಆದರೆ ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಸಂಭ್ರಮಾಚರಣೆಯ ಚಿತ್ರಣವೇ ಬದಲಾಗಿ ಹೋಗಿದೆ. ಸಾರ್ವಜನಿಕರು ಗುಂಪಾಗಿ ಸೇರುವುದಾಗಲಿ, ಓಕುಳಿ ಆಡುವುದಾಗಲಿ, ಯಾವುದೇ ಸಡಗರದ ವಾತಾವರಣ ಕಂಡುಬರುತ್ತಿಲ್ಲ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೋಳಿ ಹಬ್ಬದ ದಿನವೇ ರಾಜ್ಯದ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಟ್ವೀಟ್ ಮಾಡಿದ್ದಾರೆ.

ಮಾರಣಾಂತಿಕ ಕೊರೋನಾ ವೈರಸ್​ಗೆ ವಿಶ್ವಾದ್ಯಂತ 3,800 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತದಲ್ಲಿಯೂ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಈವರೆಗೆ 42 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button