ರಾಜ್ಯದಲ್ಲಿ ಮೊದಲ ಕೊರೊನಾ ವೈರಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್‌ ಕೇಸ್‌ ಪತ್ತೆಯಾಗಿದೆ. ಅಮೆರಿಕದಿಂದ ಬಂದ ಬೆಂಗಳೂರು ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್‌ ಸೋಂಕು ಇರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಖಚಿತಪಡಿಸಿದ್ದಾರೆ.

40 ವರ್ಷದ ಸಾಫ್ಟ್ ವೇರ್ ಉದ್ಯೋಗಿಯಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಇವರು ಅಮೆರಿಕದಿಂದ ಮಾರ್ಚ್‌ 1ರಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ವ್ಯಕ್ತಿಯಲ್ಲಿ ಕೊರೊನಾ ವೈರಸ್‌ ಪತ್ತೆ ಹಿನ್ನಲೆಯಲ್ಲಿ ಆತನ ಪತ್ನಿ, ಮಗು ಹಾಗೂ ಚಾಲಕನನ್ನು ಪ್ರತ್ಯೇಕವಾಗಿ ಇಡಲಾಗಿದೆ. ಸೋಂಕಿತನನ್ನು ಪ್ರತ್ಯೇಕವಾಗಿರಿಸಿ ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾರತದಲ್ಲಿ ಇದುವರೆಗೂ 43 ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ಕೇಸ್‌ ಸೇರಿ ಒಟ್ಟು ಪ್ರಕರಣಗಳ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಶಂಕಿತ ಪ್ರಕರಣಗಳು ಕೂಡ ಕಂಡು ಬರುತ್ತಿದ್ದು ತೀವ್ರ ನಿಗಾ ವಹಿಸಲಾಗುತ್ತಿದೆ. ಇದುವರೆಗೂ ವಿಶ್ವಾದ್ಯಂತ ಕೊರೊನಾಗೆ 3,831 ಜನ ಬಲಿಯಾಗಿದ್ದು, 60ಕ್ಕೂ ಹೆಚ್ಚು ದೇಶಗಳಿಗೆ ಕೊರೊನಾ ಹಬ್ಬಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button