ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ನೇಮಕವಾಗಿದ್ದಾರೆ.
ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹ್ಮದ್ ನೂತನ ಕಾರ್ಯಾಧ್ಯಕ್ಷರಾಗಿ ನೇಮಿಸಲ್ಪಟ್ಟಿದ್ದಾರೆ.
ಇದರಿಂದಾಗಿ ಬಹಳ ದಿನದಿಂದ ಇದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.
ದಿನೇಶ ಗುಂಡೂರಾವ್ ರಾಜಿನಾಮೆ ನೀಡಿದ್ದರಿಂದಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕೆ ಹಲವರು ಕಣ್ಣಿಟ್ಟಿದ್ದರು. ಯಾರನ್ನು ನೇಮಕಮಾಡಲಾಗುತ್ತಿದೆ ಎನ್ನುವ ಕುತೂಹವಿತ್ತು. ಅಂತಿಮವಾಗಿ ಡಿ.ಕೆ.ಶಿವಕುಮಾರ ಅವರ ಮೇಲೆಯೇ ಪಕ್ಷ ವಿಶ್ವಾಸವಿಟ್ಟು, ನಾಯಕತ್ವ ವಹಿಸಿದೆ.
ಇದರ ಜೊತೆಗೆ, ಕಾರ್ಯಾಧ್ಯಕ್ಷ ಹುದ್ದೆಯನ್ನು ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಲಿಂಗಾಯತರಿಗೆ ಹಂಚಲಾಗಿದೆ.
ಎಲ್ಲ ವರ್ಗದವರಿಗೂ ಸಮಾಧಾನ ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಿದಂತಾಗಿದೆ.
ಇನ್ನು ವಿರೋಧ ಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜಿನಾಮೆಯನ್ನು ಕಾಂಗ್ರೆಸ್ ಹೈ ಕಮಾಂಡ್ ಅಂಗೀಕರಿಸಿಲ್ಲ. ಸಿದ್ದರಾಮಯ್ಯ ಅವರೇ ಆ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ