ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರಯತ್ನದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ನಾಟಿಕೋಳಿ ಸಾಕಾಣಿಕೆ ಘಟಕ ಸ್ಥಾಪಿಸುವ ಉದ್ದೇಶದಿಂದ ಕೋಳಿಗಳನ್ನು ವಿತರಿಸಲಾಯಿತು.
ಕರ್ನಾಟಕ ಸರ್ಕಾರ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳದ ವತಿಯಿಂದ “ಗ್ರಾಮೀಣ ಭಾಗದ ಬಡ ರೈತ ಕುಟುಂಬಗಳ ಆರ್ಥಿಕ ಸಬಲೀಕರಣ ಮತ್ತು ಸಾರ್ವಜನಿಕರಿಗೆ ಪೌಷ್ಟಿಕ ಆಹಾರ” ಪೂರೈಸುವ ದೃಷ್ಟಿಯಿಂದ 2019-20 ನೇ ಸಾಲಿನ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 5 ವಾರದ 38 ಅಸಿಲ್ ಕ್ರಾಸ್/ನಾಟಿ ಕೋಳಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಅಂಬೆವಾಡಿ ಹಾಗೂ ಹಿಂಡಲಗಾ ಗ್ರಾಮದ 42 ಜನರಿಗೆ ಉದ್ಯೋಗ ಹಾಗೂ ಅವರ ಆರ್ಥಿಕತೆಯ ಸ್ಥಿತಿಗಳನ್ನು ಸುಧಾರಿಸಲು ಕೋಳಿ ಸಾಕಾಣಿಕೆಗೆ ಚಾಲನೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಸಂಬಂಧಪಟ್ಟ ಅಧಿಕಾರಿಗಳು, ಜಯವಂತ ಬಾಳೇಕುಂದರಗಿ, ನಾರಾಯಣ, ಅಶೋಕ ಮನ್ನಿಕೇರಿ, ಕುಡಚಿಕರ್, ಗಜಾನನ ಕಾಕತಕರ್, ಫಲಾನುಭವಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ