ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಡಿಕೆಶಿ ಬೆಂಬಲಿಗರ ಸಂಭ್ರಮ ಮುಗಿಲುಮುಟ್ಟಿದೆ. ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಶುಭಕೋರಲು ಬೆಂಗಳೂರಿಗೆ ಬರುತ್ತಿರುವವರಿಗೆ ಡಿಕೆಶಿವಕುಮಾರ್, ಬೇರೆ ಕಾರ್ಯಕ್ರಮಗಳು ಇರುವುದರಿಂದ ಬೆಂಬಲಿಗರ ಭೇಟಿ ಸಾಧ್ಯವಿಲ್ಲ, ಇಂದು ಬೆಂಗಳೂರಿಗೆ ದಯವಿಟ್ಟು ಬರಬೇಡಿ ಎಂದು ಮನವಿ ಮಾಡಿದ್ದಾರೆ.
ಕನಕಪುರ, ರಾಮನಗರ ಸೇರಿ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸಲು ಕಾರ್ಯಕರ್ತರು, ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಆದರೆ, ಬೇರೆ ಕಾರ್ಯಕ್ರಮಗಳು ಇರುವುದರಿಂದ ಬೆಂಬಲಿಗರ ಭೇಟಿ ಸಾಧ್ಯವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.
ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ಡಿಕೆಶಿ, ಕನಕಪುರ ಕ್ಷೇತ್ರದ ಕಾರ್ಯಕರ್ತರು ಹಾಗೂ ಜನತೆಯಲ್ಲಿ ನನ್ನದೊಂದು ಮನವಿ. ನನ್ನನ್ನು ಭೇಟಿ ಮಾಡಲು ಹಾಗೂ ಶುಭಾಶಯ ಕೋರಲು ಬೆಂಗಳೂರಿಗೆ ಅಗಮಿಸಬೇಡಿ. ಏಕೆಂದರೆ ನನಗೆ ಇಂದು ಅನೇಕ ಸಭೆ ಹಾಗೂ ಕೆಲಸ ಇದೆ. ಹೀಗಾಗಿ ನಿಮ್ಮನ್ನು ಭೇಟಿ ಮಾಡಲು ಆಗದೆ ಇರಬಹುದು. ಇದರಿಂದ ನಿಮಗೆ ನಿರಾಸೆ ಉಂಟಾಗಬಹುದು ಎಂದಿದ್ದಾರೆ.
ಉಪಚುವಾಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಕಳೆದ ಮೂರು ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮನೆ ಮಾಡಿತ್ತು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಡಿಕೆಶಿ ಭಾರೀ ಲಾಭಿ ನಡೆಸಿದ್ದರು. ದೆಹಲಿಗೆ ತೆರಳಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ಕೂಡ ನಡೆಸಿದ್ದರು. ಈಗ ಡಿಕೆಶಿಗೆ ಕೆಪಿಸಿಸಿ ರಾಜ್ಯಾಧ್ಯಕ್ಷ ಸ್ಥಾನ ಒಲಿದು ಬಂದಿದೆ. ಹೀಗಾಗಿ ಅವರು ಇಂದು ಸಾಕಷ್ಟು ಸಭೆಗಳಲ್ಲಿ ಪಾಲ್ಗೊಳ್ಳಬೇಕಿದೆ.
ಬೆಂಬಲಿಗರನ್ನು ಭೇಟಿ ಮಾಡುವ ಉದ್ದೇಶದಿಂದಲೇ ಡಿಕೆಶಿ ಭಾನುವಾರ ಕನಕಪುರಕ್ಕೆ ತೆರಳಲಿದ್ದಾರೆ. ಈ ವೇಳೆ ದಿನಪೂರ್ತಿ ಕನಕಪುರ ಕ್ಷೇತ್ರದಲ್ಲಿ ಅವರು ಕಳೆಯಲಿದ್ದಾರೆ ಎನ್ನಲಾಗಿದೆ.
ಉಪಚುವಾಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಕಳೆದ ಮೂರು ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮನೆ ಮಾಡಿತ್ತು. ಈಗ ಅಂತಿಮವಾಗಿ ಕೆಪಿಸಿಸಿ ಅಧ್ಯಕ್ಷ ಪಟ್ಟ ಡಿಕೆಶಿಗೆ ಒಲಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ