ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ನ 5 ಪ್ರಕರಣಗಳು ಪತ್ತೆಯಾಗಿವೆ. ಈ ನಡುವೆ ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ವೃದ್ದನೋರ್ವ ಸಾವನ್ನಪ್ಪಿದ ಹಿನ್ನಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಗೋಷಿಸಲಾಗಿದೆ.
ಕೊರೋನಾ ವೈರಸ್ ಹರಡದಂತೆ ಎಚ್ಚರ ವಹಿಸಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಾಕ್ಕೆ ಆದೇಶ ಹೊರಡಿಸಿದ್ದಾರೆ.
ಕಲಬುರಗಿಯಲ್ಲಿ ಕೊರೊನಾದಿಂದ ವೃದ್ಧನ ಸಾವು ಹಿನ್ನಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಸಂಬಂಧಿಕರಿಗೂ ಕೊರೊನಾ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಿಮ್ಸ್ನಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹಾಸನ ಡಿಹೆಚ್ಒ ಡಾ,ಸತೀಶ್ ಮಾಹಿತಿ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಗದಗ್ನ ಐತಿಹಾಸಿಕ ಲಕ್ಕುಂಡಿ ಉತ್ಸವನ್ನು ಮುಂದೂಡಲಾಗಿದೆ. ಸರ್ಕಾರದ ಆದೇಶ ಹಿನ್ನಲೆಯಲ್ಲಿ ಉತ್ಸವವನ್ನು ಮುಂದೂಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಗದಗ ಡಿಸಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ