ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲ ಶಾಲೆಗಳ 6ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಮಾ.14ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ.
ಇನ್ನು 1ರಿಂದ 6ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಜಿಲ್ಲೆಗಳ ಪೂರ್ವ ಪ್ರಾಥಮಿಕ, ಎಲ್‌ಕೆಜಿ, ಯುಕೆಜಿ ಹಾಗೂ 1ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಗುರುವಾರದಿಂದಲೇ ಬೇಸಿಗೆ ರಜೆ ನೀಡಿ, ನಂತರ 2020-21ನೇ ಸಾಲಿನ ವೇಳಾಪಟ್ಟಿಯಂತೆ ಶಾಲೆಗಳನ್ನು ಪುನರಾರಂಭ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿವೆ. ಆದರೆ, ಮಾರ್ಚ್ 13ರಿಂದ ಪರೀಕ್ಷಾ ಪೂರ್ವಸಿದ್ಧತಾ ರಜೆ ನೀಡಬೇಕು. ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಬಂದು ಪರೀಕ್ಷೆ ಬರೆದರಷ್ಟೇ ಸಾಕು. ಮಾರ್ಚ್ 23ರೊಳಗೆ ಎಲ್ಲ ಪರೀಕ್ಷೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಬೇಸಿಗೆ ರಜೆ ನೀಡಬೇಕು ಎಂದು ಆದೇಶಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ