ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸಾರ್ಕಾರ ಎಲ್ಲಾ ರಾಜ್ಯಗಳಿಗೂ ವಿಶೇಷ ಅನುದಾನ ಘೋಷಣೆ ಮಾಡಿದೆ.
ಕೊರೊನಾ ಸೋಂಕಿಗೆ ಈಗಾಗಲೇ ಕಲಬುರಗಿಯಲ್ಲಿ ಓಬ್ಬರು ಹಾಗೂ ದೆಹಲಿಯಲ್ಲಿ ಒಬ್ಬರು ಸೇರಿದಂತೆ ದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕೊರೊನಾಗೆ ಬಲಿಯಾದ ಇಬ್ಬರ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಸೋಂಕಿತರ ಚಿಕಿತ್ಸಾ ವೆಚ್ಚವನ್ನು ಆಯಾ ರಾಜ್ಯ ಸರ್ಕಾರ ಭರಿಸಬೇಕು. ಆಯಾ ರಾಜ್ಯಗಳ SDRF ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ ಬಳಸಿ ಎಂದು ಎಲ್ಲಾ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
ಕೊರೊನಾ ಸೋಂಕು ತಡೆಗೆ ಹೆಚ್ಚುವರಿ ಲ್ಯಾಬ್ ತೆರೆಯುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಈ ನಡುವೆ ಕೊರೋನಾ ವೈರಸ್ ವಿರುದ್ಧ ಸಾರ್ಕ್ ರಾಷ್ಟ್ರಗಳು ಒಟ್ಟಾಗಿ ಹೋರಾಟ ನಡೆಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆನೀಡಿದ್ದ ಬೆನ್ನಲ್ಲೇ ಪಾಕಿಸ್ತಾನ ಬೆಂಬಲ ಸೂಚಿಸಿದ್ದು, ಕೊರೋನಾ ವಿರುದ್ಧ ಹೋರಾಡಲು ಎಲ್ಲರೂ ಒಂದಾಗಬೇಕಿದೆ ಎಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ