ಕೊರೊನಾ ವೈರಸ್: ದೇಶದಲ್ಲಿ 5ನೇ ಬಲಿ

ಪ್ರಗತಿವಾಹಿನಿ ಸುದ್ದಿ; ಜೈಪುರ: ಕೊರೊನಾ ವೈರಸ್ ಗೆ ದೇಶದಲ್ಲಿ 5ನೇ ಸಾವು ಸಂಭವಿಸಿದ್ದು, ಜನರಲ್ಲಿ ಆತಂಕ ಹೆಚ್ಚಳಗೊಂಡಿದೆ. ರಾಜಸ್ಥಾನದ ಜೈಪುರದಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.

Home add -Advt

ಇಟಲಿ ಪ್ರವಾಸಿಗ ಸೇರಿದಂತೆ ಈಗ ದೇಶದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ದೇಶಾದ್ಯಂತ ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾರ್ಚ್ 22ರಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮನೆಯಲ್ಲಿರಿ. ಕೊರೊನಾಗೆ ಔಷಧಿ ಇಲ್ಲ. ಹೀಗಾಗಿ ನಾವು ಜಾಗ್ರತೆಯಿಂದ ಇರಲು ಸಂಕಲ್ಪ ಮತ್ತು ಸಂಯಮ ಬಹಳ ಮುಖ್ಯ. ಸ್ವಯಂ ಸಂಕಲ್ಪದಿಂದ ನಾವು ಮಹಾಮಾರಿಯನ್ನು ಹೊಡೆದೋಡಿಸಬಹುದು. ದೇಶದಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ವೈರಸ್ ಸೋಕದೇ ಇರಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದು ಮನವಿ ಮಾಡಿದ್ದಾರೆ.

Related Articles

Back to top button