ಬಾಲಿವುಡ್ ಖ್ಯಾತ ಗಾಯಕಿಗೂ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ನಡುವೆ ಬಾಲಿವುಡ್‍ನ ಖ್ಯಾತ ಗಾಯಕಿ ಕನ್ನಿಕಾ ಕಪೂರ್ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಕನ್ನಿಕಾ ಅವರನ್ನು ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯ (ಕೆಜಿಎಂಯು)ದ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಿಕಾ ಮಾರ್ಚ್ 15ರಂದು ಲಂಡನ್‍ನಿಂದ ಲಕ್ನೋಗೆ ಮರಳಿದ್ದರು. ಲಂಡನ್ ನಿಂದ ವಾಪಸ್ ಆದ ಬಳಿಕ ಕನ್ನಿಕಾ, ಮೂರು ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ಸುಮಾರು 300-400 ಜನರು ಭಾಗವಹಿಸಿದ್ದರು ಎಂದು ಕನ್ನಿಕಾ ತಂದೆ ಹೇಳಿದ್ದಾರೆ.

ಕನ್ನಿಕಾ ಅವರೊಂದಿಗೆ ನೇರ ಸಂಭಾಷಣೆ ನಡೆಸಿದ, ಪಾರ್ಟಿಯಲ್ಲಿ ಭಾಗವಹಿಸಿದ್ದ ಜನರಿಗಾಗಿ ಈಗ ಆರೋಗ್ಯ ಇಲಾಖೆ ಹುಡುಕಾಟ ನಡೆಸಿದೆ. ಇನ್ನು ಕನ್ನಿಕಾ ಕುಟುಂಬ ಸದಸ್ಯರನ್ನೂ ಚಿಕಿತ್ಸೆಗೆ ಒಳಪಡಿಸಲಾಗಿದೆ.

Home add -Advt

Related Articles

Back to top button