ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲೆಯಾದ್ಯಂತ ಕೋವಿಡ್ (ಕರೋನಾ ವೈರಾಣು ಕಾಯಿಲೆ-2019) ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ–1897 ಮತ್ತು “The Karnataka Epidemic Diseases, COVID-19 Regulations, 2020” (12) ರ ಪ್ರಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮಾ.೩೧ ರವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಪ್ರಕಾರ ಪ್ರತಿಬಂಧಕಾಜ್ಞೆ ಹೊರಡಿಸಿದ್ದಾರೆ.
ಈಗಾಗಲೇ ಜಾರಿಯಲ್ಲಿದ್ದ ಪ್ರತಿಬಂಧಕಾಜ್ಞೆ ಅವಧಿಯನ್ನು ದಿನಾಂಕ: 31.03.2020 ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿರುತ್ತಾರೆ.
ಕೋವಿಡ್ ೧೯ ಹರಡುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಅನುಸರಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಹ
ಆದೇಶದಲ್ಲಿ ತಿಳಿಸಿರುತ್ತಾರೆ.
ಈ ಆದೇಶದ ಪ್ರಕಾರ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದೆ. ಬೆಳಗಾವಿ ಜಿಲ್ಲೆಗೆ ಆಗಮಿಸುವ ಎಲ್ಲ ಅಂತರಾಷ್ಟ್ರೀಯ/ಭಾರತೀಯ(ಯಾವುದೇ ದೇಶಕ್ಕೆ ಭೇಟಿ ನೀಡಿರಲಿ) ಹಾಗೂ ವಿದೇಶಿಯರು ಬೆಳಗಾವಿ ಜಿಲ್ಲೆಗೆ ಆಗಮಿಸುವಾಗ ಅವರಿಗೆ ರೋಗ ಲಕ್ಷಣ ಇಲ್ಲದಿದ್ದರೂ
(Asymptomatic) ಸಹ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರುವುದು.
ಬೆಳಗಾವಿ ಜಿಲ್ಲೆಯಾದ್ಯಂತ ಸಿನಿಮಾ ಮಂದಿರಗಳು, ಮಾಲ್‌ಗಳು, ನಾಟಕಗಳು, ರಂಗಮಂದಿರಗಳು, ಪಬ್‌ಗಳು, ಸ್ಟೇಟ್ ಕ್ಲಬ್‌ಗಳು, ವಸ್ತುಪ್ರರ್ದಶನಗಳು, ಸಂಗೀತ ಹಬ್ಬಗಳು, ಕ್ಲಬ್‌ಗಳು, ಮ್ಯಾರಥಾನ್, ಕ್ರೀಡಾಂಗಣದಲ್ಲಿ ಹೆಚ್ಚಿನ ಪ್ರೇಕ್ಷಕರು ವೀಕ್ಷಿಸುವ ಕ್ರೀಡಾ ಕೂಟಗಳಾದ ಕ್ರಿಕೆಟ್, ಫುಟ್‌ಬಾಲ್, ಬಾಸ್ಕೆಟ್‌ಬಾಲ್, ಹಾಕಿ ಮತ್ತು ಇತರ, ಹಾಗೂ ಹೆಚ್ಚಾಗಿ ಜನರು ಸೇರುವಂತಹ ಮದುವೆ ಕಾರ್ಯಕ್ರಮಗಳನ್ನು ನಡೆಸದಿರುವುದು, ಧಾರ್ಮಿಕ ಕಾರ್ಯಕ್ರಮಗಳಿಗೆ ಹಾಗೂ ಜಾತ್ರೆಗಳಿಗೆ ಆದಷ್ಟು ಕಡಿಮೆ ಸಂಖ್ಯೆಯ ಜನರು ಭಾಗವಹಿಸುವುದು.
ಬೇಸಿಗೆ ಶಿಬಿರಗಳು, ಸಭೆ ಸಮಾರಂಭಗಳು, ಕ್ರೀಡಾಕೂಟಗಳು, ವಿಚಾರ ಸಂಕೀರಣ ಮತ್ತಿತರ
ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ತಿಳಿಸಿದ್ದಾರೆ.
ಹೆಚ್ಚು ಜನರು ಬಳಸುವ ಸ್ವಿಮ್ಮಿಂಗ್ ಪೂಲ್, ಜಿಮ್ ಮುಂತಾದವುಗಳನ್ನು ಮುಚ್ಚುವುದು. ಹೆಚ್ಚಾಗಿ ವಿದೇಶಗಳಿಗೆ ಪ್ರಯಾಣಿಸಿಸುವ ಐ.ಟಿ, ಬಿ.ಟಿ. ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಖಾಸಗಿ ವೈದ್ಯರುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ ಗಳು ದಿನಾಂಕ:21-02-2020 ರ
ನಂತರ ವಿದೇಶದಿಂದ ಬಂದು ರೋಗ ಲಕ್ಷಣಗಳು ಇರುವ ರೋಗಿಗಳು ಇದ್ದಲ್ಲಿ ತಡಮಾಡದೆ ಕಡ್ಡಾಯವಾಗಿ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರವಾಣಿ /ಫ್ಯಾಕ್ಸ್/ವಾಟ್ಸ್ /104 ಸಹಾಯವಾಣಿ ಮೂಲಕ ತಿಳಿಸಲು ಕ್ರಮ ಕೈಗೊಳ್ಳುವುದು.
ಪ್ರತಿಯೊಬ್ಬರು ತಮ್ಮಿಂದ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಮತ್ತು ಯಾರನ್ನೂ ಮುಟ್ಟಕೂಡದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷೆಗಳು ಮತ್ತು ಸರಕಾರಿ ಕಛೇರಿಗಳು ಅಬಾಧಿತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿರುವ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು, ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಬಂಧಕಾಜ್ಞೆ ಆದೇಶವನ್ನು ಜಾರಿಗೊಳಿಸಲು ಪೊಲೀಸ್ ಆಯುಕ್ತರು, ಬೆಳಗಾವಿ ನಗರ, ಬೆಳಗಾವಿ, ಜಿಲ್ಲಾ ಪೊಲೀಸ ಅಧೀಕ್ಷಕರು, ಬೆಳಗಾವಿ, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲದಾರರು ಹಾಗೂ ಜಿಲ್ಲೆಯ ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಭಾನುವಾರ ಜನತಾ ಕರ್ಫ್ಯೂ: ರಾಜ್ಯದಲ್ಲಿ ಸಂಪೂರ್ಣ ಬಂದ್ಗೋವಾ, ಮಹಾರಾಷ್ಟ್ರ ಬಸ್ ಸಂಚಾರ ಸಂಪೂರ್ಣ ಸ್ಥಗಿತ; ಜಿಲ್ಲೆಯಲ್ಲಿ 118 ಜನರ ಮೇಲೆ ನಿಗಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ