ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಇಂದು ಟ್ವೀಟ್ ಮಾಡಿದ್ದ ಆರೋಗ್ಯ ಸಚಿವ ಶ್ರೀರಾಮುಲು, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಸ್ವಕ್ಷೇತ್ರಕ್ಕೆ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತೆರಳಿದ್ದರು. ಈ ವೇಳೆ ಮಾತನಾಡಿದ ಅವರು, ಮೆಕ್ಕಾದಿಂದ ಬಂದವರಿಗೆ ವೈರಸ್​ ಇರುವುದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಇಬ್ಬರು ಮೆಕ್ಕಾದಿಂದ ಬಂದಿದ್ದಾರೆ. ಅವರಲ್ಲಿ ರೋಗದ ಲಕ್ಷಣಗಳು ಇದೆ ಎಂದು ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಆದರೆ ಇನ್ನೂ ರಿಪೋರ್ಟ್ ಬಂದಿಲ್ಲ. ರಿಪೋರ್ಟ್ ಬಂದ ಮೇಲೆ ಸಂಜೆ 6ಗಂಟೆಗೆ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು. ಇದೀಗ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಹೇಳಿಕೆ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button