ಪ್ರಗತಿವಾಹಿನಿ ಸುದ್ದಿ; ಮುಂಬೈ: ವಿಶ್ವಾದ್ಯಂತ ಹೆಚ್ಚುತ್ತಿರುವ ಮಾರಣಾಂತಿಕ ಕೊರೊನಾ ವೈರಸ್‍ಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಮುಂಬೈನಲ್ಲಿ ಕೊರೊನಾ ಸೋಂಕಿಗೆ ವಿದೇಶಿ ಪ್ರವಾಸಿಗ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಒಟ್ಟು 8 ಜನರು ಮೃತಪಟ್ಟಿದ್ದಾರೆ.
ಮುಂಬೈನಲ್ಲಿ 68 ವರ್ಷದ ಫಿಲಿಪೈನ್ಸ್ ಪ್ರಜೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಮುಂಬೈನ ಕಸ್ತೂರಬಾ ಆಸ್ಪತ್ರೆಯಿಂದ ಪ್ರೈವೇಟ್ ಆಸ್ಪತ್ರೆಗೆ ವ್ಯಕ್ತಿಯನ್ನು ಸ್ಥಳಾಂತರಿಸಲಾಗಿತ್ತು. ಅವರು ಮೂತ್ರಪಿಂಡ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ ಬಲಿಯಾಗಿದ್ದು, ಕೊರೊನಾ ದೇಶದಲ್ಲಿ ಈವರೆಗೂ 8 ಜನರನ್ನು ಬಲಿಪಡೆದುಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ