Kannada NewsKarnataka NewsLatest

ಕೊರೋನಾ ಹಿನ್ನೆಲೆ: ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಚಿಕ್ಕೋಡಿ ಆಸ್ಪತ್ರೆಯಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಕೊರೊನಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಅಲ್ಲಿನ ಕುಂದು ಕೊರತೆಗಳನ್ನು ವಿಚಾರಿಸಿದರು.

 ತುರ್ತಾಗಿ ಬೇಕಾದ ಅವಶ್ಯಕ ಸಾಮಗ್ರಿಗಳ ವಿವರ ತಿಳಿಸಿದರೆ ಅವುಗಳನ್ನು ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದಕ್ಕೂ ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಸೂಚಿಸಿದರು. ನಾವು ನಿಮ್ಮೊಂದಿಗಿದ್ದೇವೆ. ನಮಗೆ ಎಲ್ಲ ರೀತಿಯ ಸಹಕಾರ ಕೊಡಿ. ಯಾರೂ ನಿರ್ಲಕ್ಷ್ಯವಹಿಸುವುದು ಬೇಡ ಎಂದು ಗಣೇಶ ಹುಕ್ಕೇರಿ ಜನತೆಯಲ್ಲಿ ಮನವಿ ಮಾಡಿದರು.

ಇದೇ ವೇಳೆ ಸಾರ್ವಜನಿಕರಲ್ಲಿ  ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಒಂದು ಅಣಕು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

Home add -Advt

ಈ ವೇಳೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಟಿ.ಎಚ್.ಓ, ಸಿ.ಪಿ.ಐ. ಮತ್ತು ತಾಲ್ಲೂಕಿನ   ವೈದ್ಯರು ಉಪಸ್ಥಿತರಿದ್ದರು.

Related Articles

Back to top button