ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಜನರಿಗೆ ಕೊರೊನಾ ಸೋಂಕು ತಗುಲಬಹುದು ಎಂದು ಅಂದಾಜಿಸಲಾಗಿದ್ದು, ಚಿಕಿತ್ಸೆಗಾಗಿ ಸರ್ಕಾರದಿಂದ ಎಲ್ಲಾ ರೀತಿಯ ವ್ಯವಸ್ಥೆಗಾಳನ್ನು ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪರಿಷತ್ ನಲ್ಲಿ ಹೇಳಿಕೆ ನೀಡಿದ ಡಿಸಿಎಂ ಅಶ್ವತ್ಥನಾರಾಯಣ, ರಾಜ್ಯದಲ್ಲಿ ಈಗಾಗಲೇ 39 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇನ್ನೂ 1 ಲಕ್ಷ ಜನರಿಗೆ ಈ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.
ಕೊರೊನಾ ಸೋಂಕಿತರನ್ನು ಕ್ವಾರಂಟೈನ್ನಲ್ಲಿ ಇರಿಸಲು 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದ್ದೇವೆ. ಸರ್ಕಾರದಿಂದ ಒಂದು ಸಾವಿರ ವೆಂಟಿಲೇಟರ್ ಆರ್ಡರ್ ಮಾಡಿದ್ದೇವೆ. 15 ಲಕ್ಷ ನಾರ್ಮಲ್ ಮಾಸ್ಕ್ಗಳು ಹಾಗೂ 5 ಲಕ್ಷ ಎನ್-95 ಮಾಸ್ಕ್ ಆರ್ಡರ್ ಮಾಡಿದ್ದೇವೆ ಎಂದು ಹೇಳಿದರು.
ಕೊರೊನಾಗೆ ಔಷಧ ಇಲ್ಲ. ಈ ಸೋಂಕಿಗೆ ಔಷಧ ಕಂಡು ಹಿಡಿಯುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ವೆಂಟಿಲೇಟರ್ ವ್ಯವಸ್ಥೆ ಪಡೆದ ಕೊರೋನಾ ಸೋಂಕಿತರು ಯಾರೂ ಇಲ್ಲ. ಯಾರಿಗೂ ವೆಂಟಿಲೇಟರ್ ಹಾಕುವ ಅಗತ್ಯ ಈವರೆಗೆ ಬಂದಿಲ್ಲ. ಸೋಂಕಿತರು ನಾರ್ಮಲ್ ಟ್ರೀಟ್‌ಮೆಂಟ್ ಪಡೆದು ಗುಣ ಆಗುತ್ತಿದ್ದಾರೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ