ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿರುವ ಪ್ರಧಾನಿ ಮೋದಿ, ನಾಳೆ ಬೆಳಿಗ್ಗೆ 9ಗಂಟೆಗೆ ದೇಶದ ಜನತೆಗಾಗಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದಾರೆ.
ಕೊರೊನಾ ವೈರಸ್ ಭೀತಿಯಿಂದ ಈಗಾಗಲೇ ಮೋದಿ ಅವರು, ದೇಶವನ್ನು ಏಪ್ರಿಲ್ 14ರವರೆಗೆ ಲಾಕ್ಡೌನ್ ಮಾಡಿದ್ದಾರೆ. ಇಂದು ಕೂಡ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾತನಾಡಿದ್ದು, ನಂತರ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಧಾನಿ ನಾಳೆ ವಿಡಿಯೋ ಸಂದೇಶ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ನಾಳೆ ಪ್ರಧಾನಿ ಮೋದಿ ನಡೆಸಲಿರುವ ವಿಡಿಯೋ ಸಂದೇಶದ ಮೇಲೆ ಇಡೀ ದೇಶದ ಜನರ ಚಿತ್ತ ನೆಟ್ಟಿದ್ದು, ಏ.14ಕ ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿದೆಯೇ ಅಥವಾ ಇನ್ನಷ್ಟು ದಿನಗಳ ಕಾಲ ಮುಂದುವರೆಯಲಿದೆಯೇ ಎಂಬ ಕುತೂಹಲದಿಂದ ಕಾಯುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ