ಶಾಲಾ ವಾಹನ/ ಅಟೋರಿಕ್ಷಾಗಳ ಸುರಕ್ಷತಾ ಕುರಿತು ವಿಶೇಷ ಕಾರ್ಯಾಚರಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ನಗರ ಸಂಚಾರ ಪೊಲೀಸರು ಗುರುವಾರ ಶಾಲಾ ವಾಹನ ಮತ್ತು ಅಟೋರಿಕ್ಷಾಗಳಲ್ಲಿ ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 89 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ಸ್ಥಳದಂಡವನ್ನು ವಸೂಲ ಮಾಡಲಾದೆ. ಮುಂದಿನ ದಿನಗಳಲ್ಲಿ ಬೆಳಗಾವಿ ನಗರ ಪೊಲೀಸ್ ಕಮೀಷನರೇಟ್ ಪ್ರದೇಶ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ಹಮ್ಮಿಕೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಕೊಳ್ಳುವ ವ್ಯವಸ್ಥೆ ಮುಂದುವರಿಯುತ್ತದೆ. ಶಾಲಾ ವಾಹನ/ಆಟೋರಿಕ್ಷಾ ಚಾಲಕರು ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಸಾಗಿಸಬಾರದೆಂದು ಹಾಗೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುವಂತೆ ಸಾರ್ವಜನಿಕರು ತಮ್ಮ ಮಕ್ಕಳನ್ನು ಶಾಲಾ ವಾಹನ / ಆಟೋರಿಕ್ಷಾಗಳಲ್ಲಿ ಕಳುಹಿಸುವಾಗ ಮಕ್ಕಳ ಹಿತದೃಷ್ಟಿಯ ಬಗ್ಗೆ ಎಚ್ಚರವಹಿಸಬೇಕು ಎಂದು ಪೊಲೀಸ್ ಆಯುಕ್ತ ಡಿ.ಸಿ.ರಾಜಪ್ಪ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ