ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖರಾಗಿದ್ದು, ಮೂರು ಸಲದ ಪರೀಕ್ಷೆಯಲ್ಲಿ ನೆಗಟಿವ್ ಬಂದಿದೆ. ಇನ್ನೊಂದು ಸಲದ ಪರೀಕ್ಷೆ ಮಾತ್ರವೇ ಬಾಕಿ ಉಳಿದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶೆಟ್ಟರ್, ಧಾರವಾಡದ ಕೊರೊನಾ ಪಾಸಿಟಿವ್ ವ್ಯಕ್ತಿ ಗುಣಮುಖರಾಗಿದ್ದಾರೆ. ಮೂರನೇ ಹಂತದ ಪ್ರಯೋಗಾಲಯ ಪರೀಕ್ಷೆಯಲ್ಲಿ ಆ ವ್ಯಕ್ತಿಯ ಫಲಿತಾಂಶ ನೆಗಟಿವ್ ಬಂದಿದೆ. ಇನ್ನೊಂದು ಸಲ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡುತ್ತೇವೆ. ಆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಿದ್ದು, ಸದ್ಯ ಆ ವ್ಯಕ್ತಿ ವೈದ್ಯಕೀಯ ನಿಗಾದಲ್ಲಿದ್ದಾರೆ ಎಂದು ತಿಳಿಸಿದರು.
ದೆಹಲಿಯಲ್ಲಿ ಧಾರ್ಮಿಕ ಸಭೆಯಲ್ಲಿ ಧಾರವಾಡದ 34 ಜನ ಭಾಗವಹಿಸಿದ್ದರು. ಅದರಲ್ಲಿ 17 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 17 ಜನರ ವರದಿ ಬರಬೇಕಿದೆ. ಕಿಮ್ಸ್ ನಲ್ಲಿ ತಬ್ಲಿಘಿಗಳ ಅಶಿಸ್ತು ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯ 50 ಸಾವಿರ ಕುಟುಂಬಗಳಿಗೆ ಉಚಿತ ಹಾಲು ನೀಡುತ್ತಿದ್ದೇವೆ. ಸ್ಲಂ ಮತ್ತು ಕಾರ್ಮಿಕರಿಗೆ ಅರ್ಧ ಲೀಟರ್ ಹಾಲು ಇಂದಿನಿಂದ ಆರಂಭವಾಗಿದೆ. ತರಕಾರಿ ಮನೆಗೆ ಮನೆಗೆ ತಲುಪಿಸುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ