ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಹೇರಲಾಗಿರುವ 21 ದಿನಗಳ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಚಿಂತನೆ ನಡೆಸಿದ್ದಾರೆ.
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರಧಾನಿ ಮೋದಿ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರು. ಏ.14ರಂದು ಲಾಕ್ ಡೌನ್ ಮುಗಿಯಲಿದೆ. ಆದರೆ ಕೊರೊನಾ ಸೋಂಕು ಹೆಚ್ಚುತ್ತಲೇ ಇರುವುದರಿಂದ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್ ಮುಂದುವರೆಸುವಂತೆ ಕೆಸಿಆರ್, ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಇದರ ಬೆನ್ನಲ್ಲೇ ತೆಲಂಗಾಣದಲ್ಲಿ ಏ.14ರವರೆಗೆ ಇದ್ದ ಈ ಲಾಕ್ಡೌನ್ ಅವಧಿಯನ್ನು ಮೊದಲಿಗೆ ಏ.16ರವರೆಗೂ ವಿಸ್ತರಿಸಿದ್ದರು. ಆದರೀಗ ಮತ್ತೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ. ಕೋವಿಡ್ 19 ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಾಕ್ಡೌನ್ ಮಾಡಲಾಗಿದೆ. ಹಾಗಾಗಿ ಜನ ಮನೆಯಲ್ಲೇ ಇರಬೇಕು. ಒಂದು ವೇಳೆ ಜನ ಲಾಕ್ಡೌನ್ ಉಲ್ಲಂಘಿಸುವುದನ್ನು ಮುಂದುವರಿಸಿದಲ್ಲಿ ಕಂಡಲ್ಲಿ ಗುಂಡಿಕ್ಕಿ ಆದೇಶ ಜಾರಿಗೊಳಿಸುತ್ತೇನೆ ಎಂದು ಕೆಸಿಆರ್ ಎಚ್ಚರಿಕೆ ನೀಡಿದ್ದರು.
ತೆಲಂಗಾಣದಲ್ಲಿ ಇಲ್ಲಿಯವರೆಗೂ ಸುಮಾರು 364 ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಸುಮಾರು10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ