ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೋವಿಡ್ ೧೯ ಸೋಂಕು ನಿವಾರಣೆಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. ೫ ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.
ಕೊರೋನಾದಂತಹ ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಕೆಎಂಎಫ್ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಮಾತ್ರವಲ್ಲ, ತುರ್ತು ಅಗತ್ಯ ಸೇವೆ ಎಂದು ಪರಿಗಣಿಸಿರುವುದರಿಂದ ಸಿಬ್ಬಂದಿ ಕೂಡ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದು, ಸರಕಾರದ ಕೊರೋನಾ ವಿರುದ್ಧದ ಹೋರಾಟದಲ್ಲಿ ನೆರವಾಗಿದೆ. ಜೊತೆಗೆ ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂ. ನೀಡಲಾಗುತ್ತಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ದೇಣಿಗೆ ವಿತರಣೆ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್, ಕೆಎಂಎಫ್ ಮಾರುಕಟ್ಟೆ ವಿಭಾಗದ ನಿರ್ದೇಶಕ ಎಂ.ಟಿ.ಕುಲಕರ್ಣಿ, ಹಣಕಾಸು ವಿಭಾಗದ ನಿರ್ದೇಶಕ ರಮೇಶ ಕೊಣ್ಣೂರ, ಮದರ್ ಡೇರಿ ನಿರ್ದೇಶಕ ಡಾ.ಸತ್ಯನಾರಾಯಣ, ಆಡಳಿತ ವಿಭಾಗದ ನಿರ್ದೇಶಕ ರಮೇಶ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ –
ಕೊರೋನಾ ನಿಧಿಗೆ ಕೆಎಂಎಫ್ ನಿಂದ 5 ಕೋಟಿ ರೂ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ