ರಾಜ್ಯದಲ್ಲಿ 8 ಹಾಗೂ 11 ವರ್ಷದ ಮಕ್ಕಳಲ್ಲೂ ಕೊರೊನಾ ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇಂದು ಒಂದೇ ದಿನದಲ್ಲಿ 10 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 8 ವರ್ಷದ ಬಾಲಕನಿಗೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಗೆ ಕೊರೋನಾ ಸೋಂಕು ತಗುಲಿದ್ದು, ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 4 ಪ್ರಕರಣಗಳು, ಮೈಸೂರಿನಲ್ಲಿ 5 ಪ್ರಕರಣಗಳು ಹಾಗೂ ಕಲಬುರಗಿಯಲ್ಲಿ ಒಂದು ಕೊರೋನಾ ವೈರಸ್​ ಪ್ರಕರಣ ಪತ್ತೆಯಾಗಿದೆ. ಕೊರೋನಾ ಪಾಸಿಟಿವ್​ ಕಂಡು ಬಂದ 10 ಮಂದಿಯನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ. 10 ಮಂದಿ ಸೋಂಕಿತರಲ್ಲಿ 4 ಜನ ಮಹಿಳೆಯರು ಮತ್ತು 6 ಮಂದಿ ಪುರುಷರಾಗಿದ್ದಾರೆ. ಈವರೆಗೆ ಕರ್ನಾಟಕದಲ್ಲಿ 6 ಜನ ಕೊರೋನಾಗೆ ಬಲಿಯಾಗಿದ್ದಾರೆ. 30 ಮಂದಿ ಕೊರೋನಾದಿಂದ ಗುಣಮಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button