ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನಲೆಯಲ್ಲಿ ದೇಶದ ಜನರ ಸುರಕ್ಷತೆಗಾಗಿ ಲಾಕ್ ಡೌನ್ ವಿಸ್ತರಣೆಗೆ ಪ್ರಧಾನಿ ಮೋದಿ ಸಮ್ಮಿತಿ ಸೂಚಿಸಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಇಂದು ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಂವಾದ ಮುಗಿದ ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಲಾಕ್ಡೌನ್ ವಿಸ್ತರಣೆ ಅನಿವಾರ್ಯ ಎಂದು ತಿಳಿಸಿದ್ದಾರೆ.
ಲಾಕ್ಡೌನ್ ವಿಸ್ತರಣೆ ವಿಷಯವಾಗಿ ಪ್ರಧಾನಿ ಮೋದಿ ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಮುಂದುವರಿದ ಹಲವು ದೇಶಗಳ ಪರಿಸ್ಥಿತಿಗಿಂತ ಭಾರತ ಉತ್ತಮ ಸ್ಥಿತಿಯಲ್ಲಿದೆ. ಕಾರಣ ನಾವು ಬೇಗನೇ ಲಾಕ್ಡೌನ್ ಆರಂಭಿಸಿದ್ದೆವು. ಒಂದು ವೇಳೆ ಈಗ ಲಾಕ್ಡೌನ್ ಸಡಿಲಿಸಿದರೆ ನಾವು ಇಷ್ಟು ಸಂಪಾದಿಸಿದ್ದನ್ನು ಕಳೆದುಕೊಳ್ಳಲಿದ್ದೇವೆ. ಲಾಕ್ಡೌನ್ ವಿಸ್ತರಣೆಯಾಗುವುದು ಈಗ ಅನಿವಾರ್ಯ ಮತ್ತು ಅತ್ಯವಶ್ಯಕ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ 21 ದಿನಗಳ ದೇಶವನ್ನು ಲಾಕ್ಡೌನ್ ಮಾಡಲಾಗಿದೆ. ಲಾಕ್ಡೌನ್ ಘೋಷಣೆಯಾಗಿ 18 ದಿನ ಕಳೆದರೂ ಮಾರಕ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಇದೀಗ ಲಾಕ್ ಡೌನ್ ಏ.30ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ