ಪ್ರಗತಿವಾಹಿನಿ ಸುದ್ದಿ; ರಾಮನಗರ: ಮಾರಣಾಂತಿಕ ಕೊರೊನಾ ಸೋಂಕು ತಡೆಗಾಗಿ ದೇಶಾದ್ಯಂತ ಲಾಕ್‍ಡೌನ್ ಮಾಡಿದ್ದರೂ ಜನರು ಅನಗತ್ಯವಾಗಿ ರಸ್ತೆಗಿಳಿಯುತ್ತಿದ್ದಾರೆ. ಈ ನಡುವೆ ರಾಮನಗರ ಜಿಲ್ಲೆಯಲ್ಲಿ ಲಾಕ್‍ಡೌನ್ ಉಲ್ಲಂಘನೆಗೆ ಸಂಬಂಧಿಸಿದಂತೆ ಕೇವಲ ಎರಡು ದಿನದಲ್ಲಿ ಒಟ್ಟು 956 ವಾಹನಗಳನ್ನು ರಾಮನಗರ ಪೊಲೀಸರು ಸೀಜ್ ಮಾಡಿದ್ದಾರೆ.
ಇದೇ ವೇಳೆ ಅನುಮತಿಯಿಲ್ಲದೇ ಅಂಗಡಿ ತೆರೆದಿದ್ದಕ್ಕೆ 94 ಪ್ರಕರಣಗಳನ್ನು ದಾಖಲಿಸಲಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿ, ರಾಮನಗರ ಹಾಗೂ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಲಾಗಿದೆ. ಜೊತೆಗೆ ಅಂಗಡಿಗಳು, ಬೇಕರಿ, ಟೀ ಸ್ಟಾಲ್, ಸಲೂನ್ ಶಾಪ್‍ಗಳನ್ನು ತೆರೆದು ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲಿ ಒಟ್ಟು 94 ಎಫ್ ಐಆರ್ ದಾಖಲಾಗಿದೆ.
ರಾಮನಗರ, ಚನ್ನಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೀಜ್ ಮಾಡಿರುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಠಾಣೆಯ ಆವರಣದಲ್ಲಿ ವಾಹನಗಳನ್ನು ನಿಲ್ಲಿಸಲು ಸ್ಥಳಾವಕಾಶದ ಕೊರತೆ ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣ ಬಳಕೆಗೆ ಪೊಲೀಸ್ ಇಲಾಖೆ ಮುಂದಾಗಿದೆ.
ಸೀಜ್ ಮಾಡುವ ವಾಹನಗಳನ್ನು ಲಾಕ್‍ಡೌನ್ ತೆರವಿನ ಬಳಿಕ ದಂಡ ಹಾಕಿ ಬೈಕ್ ನೀಡಲು ಪೊಲೀಸರು ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ