ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಭೀತಿ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾದ ಹಲವರು ಗುಣಮುಖರಾಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ. ಅರಮನೆ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ 7 ಜನರು ಇಂದು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ತಿಳಿಸಿದ್ದಾರೆ.
ಮೈಸೂರಿನ ಜನತೆ ಆತಂಕಕ್ಕೆ ಒಳಗಾಗೋದು ಬೇಡ. ಈಗಾಗಲೇ ಇಬ್ಬರು ಡಿಸ್ಚಾರ್ಜ್ ಆಗಿದ್ದು, ಇಂದು ಏಳು ಜನರು ಗುಣಮುಖರಾಗಿದ್ದು, ಅವರಲ್ಲಿ ವರದಿ ನೆಗೆಟಿವ್ ಬಂದಿದೆ. ನೆಗೆಟಿವ್ ವರದಿ ಬಂದಿರುವ ಏಳು ಜನರನ್ನು ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ನಮ್ಮ ಸಿಬ್ಬಂದಿ ಎಲ್ಲದಕ್ಕೂ ಸಿದ್ಧರಾಗಿದ್ದು, ಸೋಂಕಿತರಿಗೆ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಆರಂಭದಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸರ್ಕಾರ ಸೆಕೆಂಡರಿ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ನಿರ್ದೇಶನ ನೀಡಿದೆ. ನಮ್ಮ ಅಧಿಕಾರಿಗಳು ಸೆಕಂಡರಿ ಸಂಪರ್ಕದಲ್ಲಿದ್ದ ಒಟ್ಟು 800 ಜನರ ಬಗ್ಗೆ ಮಾಹಿತಿ ಸಂಗ್ರಹಿಸಿ ಎಲ್ಲರನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಪಾಸಿಟಿವ್ ಪ್ರಕರಣಗಳು ಎಷ್ಟೇ ಬಂದರೂ, ನಾವು ಚಿಕಿತ್ಸೆ ನೀಡಲು ಸಿದ್ಧವಿದ್ದೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ