ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನ ದಿನಕ್ಕೂ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಒಂದುವರೆ ವರ್ಷದ ಮಗು ಸೇರಿದಂತೆ 36 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 5, ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ 8, ಚಿಕ್ಕೋಡಿಯಲ್ಲಿ 1, ಬೆಳಗಾವಿಯ ರಾಯಬಾಗದಲ್ಲಿ 7, ಬೆಳಗಾವಿಯಲ್ಲಿ 1, ಮೈಸೂರಿನಲ್ಲಿ 3, ಗದಗದಲ್ಲಿ 1, ಕಲಬುರ್ಗಿಯಲ್ಲಿ 1, ವಿಜಯಪುರದಲ್ಲಿ 7, ಕಲಬುರ್ಗಿಯಲ್ಲಿ 2 ಜನರಿಗೆ ಕೊರೋನಾ ವೈರಸ್ ಇರುವುದು ಖಚಿತವಾಗಿದೆ. ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ ಹೊಸದಾಗಿ 34 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬೆಳಗಾವಿಯ ರಾಯಬಾಗದಲ್ಲಿ ಕೆಲವು ತಿಂಗಳಿನಿಂದ ವಾಸವಾಗಿದ್ದ ಮಹಾರಾಷ್ಟ್ರದ ಮೀರಜ್, ವಿಜಯಪುರದ ನಿವಾಸಿ, ಗೋವಾದ ನಿವಾಸಿಯಲ್ಲಿ ಕೂಡ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 17 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಇದರಲ್ಲಿ ಸೇರಿದ್ದಾರೆ.
ಇನ್ನು ವಿಜಯಪುರದಲ್ಲಿ ಒಂದೂವರೆ ವರ್ಷದ ಮಗುವಿಗೆ ಅಪ್ಪ-ಅಮ್ಮನಿಂದಲೇ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನ ಫಾರ್ಮಾ ಕಂಪನಿಯ ಮೂವರು ನೌಕರರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ