Kannada NewsKarnataka NewsLatest

ಮಾಲಿನಿ ಸಿಟಿ ಸಗಟು ತರಕಾರಿ ಮಾರುಕಟ್ಟೆ ತಾತ್ಕಾಲಿಕವಾಗಿ ಸ್ಥಗಿತ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ನಗರದ ಹೊರವಲಯದ ಬಿ‌.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ತಾತ್ಕಾಲಿಕವಾಗಿ ಆರಂಭಿಸಲಾಗಿದ್ದ ಸಗಟು ತರಕಾರಿ ಮಾರುಕಟ್ಟೆಯನ್ನು ನಾಲ್ಕು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
ಗುರುವಾರ (ಏ.೧೬) ಸುರಿದ ಮಳೆ, ಗಾಳಿಯಿಂದ ತಾತ್ಕಾಲಿಕ ಮಾರುಕಟ್ಟೆಯ ಮೂಲಸೌಕರ್ಯ ಹಾನಿಗೊಂಡಿರುವ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ವಹಿವಾಟು ಸ್ಥಗಿತಗೊಳಿಸಲಾಗುತ್ತಿದೆ. ಆದ್ದರಿಂದ ಪ್ರತಿದಿನ ಈ ಮಾರುಕಟ್ಟೆಗೆ ತರಕಾರಿ ತರುತ್ತಿದ್ದ ರೈತರು, ಹಿಂಡಾಲ್ಕೋ ಅಥವಾ ಆರ್.ಟಿ.ಓ ಮೈದಾನದ ತಾತ್ಕಾಲಿಕ ಮಾರುಕಟ್ಟೆಗೆ ತೆರಳಬಹುದು ಎಂದು ತಿಳಿಸಿದ್ದಾರೆ.
ಮಾಲಿನಿಸಿಟಿ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿದ ಬಳಿಕ ಪುನಃ ಸಗಟು ಮಾರುಕಟ್ಟೆ ಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ವಿವರಗಳಿಗಾಗಿ ಈ ಸುದ್ದಿ ಓದಿ – 

 

Home add -Advt

Related Articles

Back to top button