ಅಕ್ರಮ ಮದ್ಯ ಮಾರಾಟ: ಬಿಜೆಪಿ ಲೀಡರ್ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್‍ಡೌನ್ ಘೋಷಿಸಿದ್ದರೂ, ನಿಯಮ ಉಲ್ಲಂಘನೆ ಮಾಡಿ, ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಮುಖಂಡ ಡಿ.ರಾಘವೇಂದ್ರ ಬಂಧಿತ ಆರೋಪಿ. ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಆದರೂ ಬಿಜೆಪಿ ಮುಖಂಡನ ಮಾಲೀಕತ್ವದ ಮದ್ಯದಂಗಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

Related Articles

ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಅಬಕಾರಿ ಇಲಾಖೆ ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇರುವ ಮದ್ಯದಂಗಡಿಯ ಮೇಲೆ ದಾಳಿ ಮಾಡಿದ್ದರು. ಬಿಜೆಪಿ ಮುಖಂಡ ರಾಘವೇಂದ್ರ ಮಾಲೀಕತ್ವದ ಮದ್ಯದಂಗಡಿ ಸೇರಿದಂತೆ ಮೂರು ಬಾರ್ ಮೇಲೆ ದಾಳಿ ನಡೆಸಲಾಗಿದೆ.

ರಾಘವೇಂದ್ರ ಸಂಡೂರಿನಲ್ಲಿರುವ ಕಾರ್ತಿಕ್ ರೆಸಿಡೆನ್ಸಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಾಗಿದ್ದು, ಲಾಕ್‍ಡೌನ್ ಸಮಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಯನ್ನು ಮುಚ್ಚಿದ್ದರೂ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಆರೋಪದಡಿ ರಾಘವೇಂದ್ರ ಹಾಗೂ ಇನ್ನಿಬ್ಬರನ್ನು ಬಂಧಿಸಲಾಗಿದೆ.

Home add -Advt

Related Articles

Back to top button