Latest

ವಾಣಿಜ್ಯೋದ್ಯಮ ಸಂಘದಿಂದ ರೈಲ್ವೆ ನಿಲ್ದಾಣದ ವ್ಯವಸ್ಥೆ ಪರಿಶೀಲನೆ

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇಲ್ಲಿಯ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. 
ಸಂಘದ ಅಧ್ಯಕ್ಷ ಮಹೇಶ ಬಾಗಿ, ಉಪಾಧ್ಯಕ್ಷ ಮತ್ತು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್ ಜುವಳಿ, ಮಾಜಿ ಅಧ್ಯಕ್ಷ ಪ್ರಶಾಂತ ಜೆಡಿ ಮೊದಲಾದವರು ತೆರಳಿ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 
ರೈಲ್ವೆ ನಿಲ್ದಾಣದಲ್ಲಿ ಉತ್ತಮವಾಗಿ ಸ್ವಚ್ಛತೆ ನಿರ್ವಹಣೆ ಮಾಡಲಾಗುತ್ತಿದೆ. ಆದರೆ ಅಲ್ಲಿರುವ ಕ್ಯಾಂಟೀನ್ ನಲ್ಲಿ ಸ್ವಚ್ಛತೆ ಇಲ್ಲ, ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಇಡಲಾಗುತ್ತಿಲ್ಲ. ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳ ಕೊರತೆ ಇದೆ. ಪ್ರೀ ಪೇಡ್ ಆಟೋ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎನ್ನುವ ಕುರಿತು ಅಧಿಕಾರಿಗಳ ಗಮನ ಸೆಳೆಯಲಾಯಿತು.   

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button