ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಮೇ 4 ರಿಂದ ಮೂರನೇ ಹಂತದ ಲಾಕ್‌ಡೌನ್ ಆರಂಭವಾಗಲಿದ್ದು, ಈ ನಡುವೆ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮೇ 17ರವರೆಗೆ ಲಾಕ್‌ಡೌನ್ ವಿಸ್ತರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು, ಉನ್ನತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಹೊಸ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಯಿತು.
ಹೊಸ ಮಾರ್ಗಸೂಚಿಗಳು ಮೇ 4ರಿಂದ ಮೇ 17ರವರೆಗೆ ಅನ್ವಯವಾಗಲಿವೆ. ರಾಜ್ಯದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆರೆಂಜ್ ಮತ್ತು ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ರೆಡ್ ಝೋನ್ ಜಿಲ್ಲೆಗಳಲ್ಲಿ ಷಾಪಿಂಗ್ ಕಾಂಪ್ಲೆಕ್ಸ್ ಮಾಲ್‌ಗಳನ್ನು ತೆರೆಯುವಂತಿಲ್ಲ. ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ.
ಖಾಸಗಿ ಕಂಪನಿ, ಕಚೇರಿಗಳನ್ನು ಓಪನ್ ಮಾಡಬಹುದು. ಅಗತ್ಯವಸ್ತುಗಳು ಎಂದಿನಂತೆ ಲಭ್ಯವಿರುತ್ತವೆ. ಸಾರ್ವಜನಿಕ ವಾಹನಗಳಿಗೆ ಅವಕಾಶ ನೀಡಲಾಗಿಲ್ಲ. ಗೂಡ್ಸ್ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ಆರೋಗ್ಯದ ದೃಷ್ಟಿಯಿಂದ ಗರ್ಭಿಣಿ, ಮಕ್ಕಳು ಹಿರಿಯರು ಮನೆಯಲ್ಲೇ ಇರಬೇಕು ಎಂದು ಸೂಚಿಸಲಾಗಿದೆ.
————————————-
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ