ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಕೆ ಎಸ್ ಆರ್ ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಈ ವ್ಯವಸ್ಥೆ ಇರಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್ ಆರ್ ಟಿ ಸಿ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾರ್ಯಚರಣೆಯನ್ನು ಬಿ ಎಂ ಟಿ ಸಿ ಬಸ್ ನಿಲ್ದಾಣ ಮೆಜೆಸ್ಟಿಕ್ ಸ್ಥಳಾಂತರಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಈ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾರ್ಮಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಉಚಿತ ಬಸ್ಸುಗಳ ನಿರಂತರ ಪೂರೈಕೆ ಮೂರುದಿನಗಳ ಕಾಲ ಇರುತ್ತದೆ. ಬಸ್ಸುಗಳಿಗೆ ತೆರಳುವ ಮುನ್ನ ಸೂಕ್ತ ಆರೋಗ್ಯ ಪರಿಶೀಲನೆ ನಡೆಸಿ, ಸಂಪೂರ್ಣ ಮಾಹಿತಿಯನ್ನು ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ.
ಮಾರ್ಗ ಮಧ್ಯೆ ಯಾವುದೇ ಪ್ರಯಾಣಿಕರನ್ನು ಇಳಿಸುವುದಿಲ್ಲ ನಿಗದಿತ ಬಸ್ ನಿಲ್ದಾಣಗಳಲ್ಲಿಯೇ ಇಳಿಸಲಾಗುತ್ತಿದ್ದು, ಅಲ್ಲಿ ಅವರಿಗೆ ಮತ್ತೊಮ್ಮೆ ಜಿಲ್ಲಾಡಳಿತದಿಂದ ಆರೋಗ್ಯ ತಪಾಸಣೆ ನಡೆಸಿ ಹೋಂ ಕ್ವಾರಂಟೈನ್‌ಗೆ ಸಂಬಂಧಪಟ್ಟಂತೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.
————-
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ