ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.
ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ಯುವಕ. ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಈ ಕುರಿತು ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಂತಕರ ಶೋಧ ಕಾರ್ಯ ಆರಂಭವಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ