ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೂರನೇ ಹಂತದ ಲಾಕ್ ಡೌನ್ ಮುಕ್ತಾಯವಾಗುತ್ತಾ ಬಂದರೂ ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಈ ನಡುವೆ ನಾಳೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಮೇ 17ಕ್ಕೆ ಮೂರನೇ ಹಂತದ ಲಾಕ್ ಡೌನ್ ಮುಕ್ತಾಯವಾಗಲಿದೆ. ಈಗಾಗಲೇ ಲಾಕ್ ಡೌನ್ ನಲ್ಲಿ ಕೆಲ ಸಡಿಲಿಕೆ ಮಾಡಿರುವುದರಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಜನರ ಓಡಾಟವೂ ಹೆಚ್ಚಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ನಾಳೆ ಮಧ್ಯಾಹ್ನ 3 ಗಂಟೆಗೆ ಸಿಎಂ ಗಳ ಜತೆ ಚರ್ಚೆ ನಡೆಸಲಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಮೂರನೇ ಹಂತದ ಲಾಕ್ ಡೌನ್ ಅವಧಿಯಲ್ಲಿ ನಿಯಮಾವಳಿಗಳು ತುಸು ಭಿನ್ನವಾಗಿವೆ. ಈ ನಿಯಮಾವಳಿಗಳೇನು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ. ಅದರಂತೆ ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆರೆಂಜ್ ಜೋನ್ನ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ವಿನಾಯಿತಿಗಳನ್ನು ಕಲ್ಪಿಸಲಾಗಿದೆ. ಆದರೆ ರೆಡ್ ಜೋನ್ನಲ್ಲಿರುವ ಪ್ರದೇಶಗಳಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ