Kannada NewsKarnataka NewsLatestPolitics

ಕೆಎಲ್ಇ ಆಸ್ಪತ್ರೆಯಲ್ಲಿ ಕೋವಿಡ್ -19 ಪರೀಕ್ಷಾ ಪ್ರಯೋಗಾಲಯ ಲೋಕಾರ್ಪಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಡಬ್ಲುಹೆಚ್‌ಒ, ಅಮೇರಿಕದ ಎಫ್‌ಡಿಎ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಪ್ರಮಾಣೀಕರಿಸಿದ ನೂತನವಾಗಿ ಪ್ರಾರಂಭಿಸಲಾದ ಕೋರೊನಾ ವೈರಸ್ ಕೋವಿಡ್ -೧೯ ಪರೀಕ್ಷಾ ಪ್ರಯೋಗಾಲಯವನ್ನು ಕೇಂದ್ರದ ರೇಲ್ವೆ ರಾಜ್ಯ ಮಂತ್ರಿ ಸುರೇಶ ಅಂಗಡಿ ಅವರಿಂದಿಲ್ಲಿ ಜನಸೇವೆಗೆ ಅರ್ಪಿಸಿದರು.
ಈ ಪ್ರಯೋಗಾಲಯಕ್ಕೆ ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ, ಅಮೇರಿಕದ ಆಹಾರ ಮತ್ತು ಔಷಧ ಸಂಸ್ಥೆ ಮಾನ್ಯತೆ ಪಡೆದಿದ್ದು, ಅತ್ಯಾಧುನಿಕ ವೈದ್ಯಕೀಯ ಪ್ರಯೋಗಾಲಯ ಸಾಮಗ್ರಿಗಳನ್ನು ಹೊಂದಿದೆ. ಇದರಲ್ಲಿ, ಟಿಬಿ, ಹೆಚ್೧ಎನ್೧, ಹೆಪಾಟೈಟಿಸ (ಬಿಳಿಕಾಮಾಲೆ) ವೈರಸ್ ಪರೀಕ್ಷಿಸಬಹುದು.

ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶವಷ್ಟೇ ಅಲ್ಲ ಇಡೀ ವಿಶ್ವವೇ ಇಂದು ಕೊರೊನಾ ವೈರಸ್ ಕೋವಿಡ್ -೧೯ಗೆ ತಲೆಬಾಗಿ ನಿಂತಿದೆ. ಅದನ್ನು ಹಿಮ್ಮೆಟ್ಟಿಸಲು ಕೇಂದ್ರ ಸರಕಾರವು ಸಕಲ ಕಾರ‍್ಯ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಕೊಂಡಿದೆ. ಆರೋಗ್ಯವನ್ನು ಕಾಪಾಡಲು ಅಗತ್ಯ ಸೇವಾ ಸೌಲಬ್ಯವನ್ನು ಒದಗಿಸಲಾಗುತ್ತಿದೆ. ಲಾಕಡೌನ ಪರಿಸ್ಥಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಸಾಮಾಜಿಕ, ಆರ್ಥಿಕ ಹಾಗೂ ವೈದ್ಯಕೀಯ ಸೌಲತ್ತುಗಳನ್ನು ಸರಕಾರವೇ ಭರಿಸುತ್ತಿದೆ. ವೈದ್ಯಕೀಯ ಸಿಬ್ಬಂದಿಗಳು ಸಾರ್ವಜನಿಕರ ಆರೋಗ್ಯ ಕಾಪಾಡಲು ಇದ್ದಾರೆ ಆದ್ದರಿಂದ ಸಾರ್ವಜನಿಕರು ಕೊರೊನಾ ವಾರಿಯರ‍್ಸಗೆ ಸಹಕಾರ ನೀಡಬೇಕು ಎಂದು ಕೋರಿದರು.
ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸದರೂ ಆದ ಕೆಎಲ್‌ಇ ಅಕಾಡೆಮಿ ಆಫ್ ಹೈಯರ ಎಜುಕೇಶನ ಆಂಡ್ ರಿಸರ್ಚ್ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರು ಮಾತನಾಡಿ, ಕೊರೊನಾ ವೈರಸ್ ಕೋವಿಡ್-೧೯ ಕಂಡು ಬಂದ ತಕ್ಷಣ ಕೆಎಲ್‌ಇ ಸಂಸ್ಥೆಯು ಅನೇಕ ಸಾಮಾಜಿಕ ಕಾರ‍್ಯಗಳಲ್ಲಿ ತೊಡಗಿಕೊಂಡಿತು. ಕೊವಿಡ್ ಅಲ್ಲದ ರೋಗಿಗಳಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗೆ ತೊಂದರೆಯಾಗದಂತೆ ಎಚ್ಚರಿಕೆ ಕ್ರಮ ಕೈಕೊಂಡು ನಿರಂತರವಾಗಿ ರೋಗಿಗಳ ಆರೈಕೆಯಲ್ಲಿ ತೊಡಗಿಕೊಂಡಿತು. ಫ್ಲ್ಯು ಕ್ಲಿನಿಕ್, ಉಚಿತ ಅಂಬುಲನ್ಸ್, ಪರಿಹಾರ ನಿಧಿಗೆ ೨ ಕೋಟಿ ದೇಣಿಗೆ ಸೇರಿದಂತೆ ವಿವಿಧ ಸಾಮಾಜಿಕ ಕಾರ‍್ಯಗಳನ್ನು ಮಾಡುತ್ತಲಿದೆ ಜಿಲ್ಲಾಡಳಿತ ಹಾಗೂ ಸರಕಾರದ ಕಾರ‍್ಯಕ್ಕೆ ಕೆಎಲ್‌ಇ ಸಂಸ್ಥೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತ ಸದಾ ಮಾಸ್ಕ ಧರಿಸಬೇಕು ಎಂದು ತಿಳಿಸಿರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ. ವಿ ಎಸ್ ಸಾಧುನವರ, ಕಾಹೆರನ ಕುಲಪತಿ ಡಾ. ವಿವೇಕ ಸಾವೋಜಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ‍್ಯರಾದ ಡಾ. ಎನ್ ಎಸ್ ಮಹಾಂತಶೆಟ್ಟಿ, ಕಾಹೆರನ ಕುಲಸಚಿವ ಡಾ. ವಿ ಅ ಕೋಠಿವಾಲೆ, ಡಾ. ವಿ ಡಿ ಪಾಟೀಲ, ಡಾ. ಹೆಚ್ ಬಿ ರಾಜಶೇಖರ, ಡಾ. ಪ್ರೀತಿ ಮಾಸ್ತೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button