Latest

ಶ್ರೀಗಳ ಚೇತರಿಕೆಗೆ ಮೋದಿ ಕನ್ನಡದಲ್ಲಿ ಟ್ವೀಟ್

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಅನಾರೋಗ್ಯದಿಂದ ಬಳಲುತ್ತಿರುವ ತುಮಕೂರಿನ ಸಿದ್ದಗಂಗಾಮಠದ ಶಿವಕುಮಾರ ಸ್ವಾಮಿಗಳು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಅವರು ಟ್ವೀಟ್ ಮಾಡಿದ್ದು ಕೇವಲ ಒಂದು ಗಂಟೆಯಲ್ಲಿ ತಲಾ  5 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ  ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.

https://twitter.com/narendramodi/status/1085951175936143361?s=03

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button