ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನ 28 ಕೊರೋನಾ ಪಾಸಿಟೀವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ದಕ್ಷಿಣ ಕನ್ನಡ ಮತ್ತು ಬೆಂಗಳೂರಿನಲ್ಲಿ ಕೊರೋನಾದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಮಂಡ್ಯದಲ್ಲಿ 5, ಬೆಂಗಳೂರು- 5, ಗದಗ- 4, ಬೀದರ್- 7, ಕಲಬುರ್ಗಿ-2, ದಾವಣಗೆರೆ- 3, ಬಾಗಲಕೋಟೆ- 1, ಬೆಳಗಾವಿ – 1 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿಯಲ್ಲಿ ಗರ್ಭಿಣಿ ಓರ್ವರಲ್ಲಿ ಇಂದು ಸೋಂಕು ದೃಢಪಟ್ಟಿದೆ. ಒಟ್ಟು 987 ಕೊರೊನಾ ಸೋಂಕಿತರಲ್ಲಿ 456 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ