Latest

ಸ್ಯಾನ್ ಫ್ರಾನ್ಸಿಸ್ಕೊ ದಿಂದ ಬಂದ ಓರ್ವನಲ್ಲಿ ಕೊರೊನಾ ಲಕ್ಷಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರ್ನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 69 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ನಡುವೆ ಲಾಕ್ ಡೌನ್ ಸಡಿಲಿಕೆಯಾದ ಬೆನ್ನಲ್ಲೇ ವಿದೇಶದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬಂದಿಳಿಯುತ್ತಿದ್ದಾರೆ.

ಸ್ಯಾನ್ ಫ್ರಾನ್ಸಿಸ್ಕೊ ದಿಂದ ಇಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 107 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಒಟ್ಟು 107 ಮಂದಿ ಪ್ರಯಾಣಿಕರಲ್ಲಿ 59 ಪುರುಷ ಮತ್ತು 48 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಒಬ್ಬರು ಗರ್ಭಿಣಿ ಮಹಿಳೆ ಹಾಗೂ 10 ವರ್ಷದೊಳಗಿನ ಒಂದು ಮಗು ಇದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ನಡೆಸಿದ 107 ಪ್ರಯಾಣಿಕರ ಆರೋಗ್ಯ ತಪಾಸಣೆ ವೇಳೆ, ಒಬ್ಬ ಪುರುಷ ಪ್ರಯಾಣಿಕನಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆ ಆ ವ್ಯಕ್ತಿಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

Home add -Advt

106 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Related Articles

Back to top button