
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೂರನೇ ಹಂತದ ಲಾಕ್ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದ್ದರೂ ದೇಶದಲ್ಲಿ ಕೊರೊನಾ ಅಟ್ಟಹಾಸ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿ ಮೇ 31ರವರೆಗೂ ವಿಸ್ತರಿಸಿ ಆದೇಶ ನೀಡಿದೆ.
ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ 4.0 ಜಾರಿಗೆಬರಲಿದ್ದು, ಇನ್ನು ಎರಡು ವಾರಗಳ ಕಾಲ ಲಾಕ್ ಡೌನ್ ಇರಲಿದೆ. ಆದರೆ ಈ ಲಾಕ್ ಡೌನ್ ಅವಧಿಯಲ್ಲಿ ಹಲವಾರು ಸಡಿಲಿಕೆಗಳನ್ನು ಮಾಡಲಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಕೆಲ ಹೊತ್ತಲೇ ಬಿಡುಗಡೆ ಮಾಡಲಿದೆ.
ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಅವಧಿ ವಿಸ್ತರಿಸುವುದು ಅನಿವಾರ್ಯವಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 4,987 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 90,000 ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.