Latest

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಷಿಸಿ ಸಾವು

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕ್ವಾರಂಟೈನ್ ನಲ್ಲಿದ್ದ 35 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಸ್ಪರ್ಷದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಗುಂಜಹಳ್ಳಿ ಪ್ರೌಢಶಾಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಷದಿಂದ ಸಾವನ್ನಪ್ಪಿದ್ದಾನೆ. ಗುಂಜಹಳ್ಳಿ ಗ್ರಾಮದ ಬಾರಯ್ಯ ಮೃತ ದುರ್ದೈವಿ.

ಬಾರಯ್ಯ ಕ್ವಾರಂಟೈನ್ ಗೆ ಒಳಗಾಗಿದ್ದ ಪ್ರೌಢಶಾಲೆ ಪಕ್ಕದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಾಮಗಾರಿ ನಡೆಯುತ್ತಿತ್ತು. ಇದಕ್ಕಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ವಿದ್ಯುತ್ ತಂತಿ ಸ್ಪರ್ಷದಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೆಣಸಿಕಾಯಿ ಬಿಡಿಸಲು ಕೃಷಿ ಕೂಲಿ ಕಾರ್ಮಿಕ ಹೋಗಿದ್ದ. ಆಂಧ್ರ ಪ್ರದೇಶದಿಂದ ಮರಳಿ ಬಂದಿದ್ದ ಕಾರ್ಮಿಕರನ್ನು ಶಾಲೆಯಲ್ಲಿ ಕೊರಂಟೈನ್ ಮಾಡಲಾಗಿತ್ತು. ಶನಿವಾರ ಸುರಿದ ಬಿರುಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿ ಕೆಳಗೆ ಬಿದ್ದಿದ್ದು, ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬಾರಯ್ಯ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್, ಎಸ್‍ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button