ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಸಮೀಪ ನಾಗೇರಹಾಳ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರಯತ್ನದಿಂದಾಗಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಹಣ ಮಂಜೂರಾಗಿದ್ದು, ಕೆರೆಯ ಅಗಲಿಕರಣ, ಕೆರೆಯ ಸುತ್ತಮುತ್ತ ಪೇವರ್ಸ್ ಅಳವಡಿಕೆ ಹಾಗೂ ಇನ್ನಿತರ ಕಾಮಗಾರಿಗಳು ನಡೆಯಲಿವೆ. ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪ್ರನಿಧಿಗಳು, ಗ್ರಾಮದ ಮುಖಂಡರು, ಮೃಣಾಲ್ ಹೆಬ್ಬಾಳಕರ್ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಂತೋಷ ಕಂಬಿ, ಈರಪ್ಪ ಅಂಗಡಿ, ಶಿವಾನಂದ ಗುಂಡುಗೋಳ, ಬಸಪ್ಪ ದೊಡವಾಡಿ, ಸುನಿಲ ನಂದಿ, ಸೋಮಪ್ಪ ರಾಯಣ್ಣವರ ಮೊದಲಾದವರು ಉಪಸ್ಥಿತರಿದ್ದರು.
ದೇವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿ ಬಸ್ತವಾಡ ಗ್ರಾಮದಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯಿಂದ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಸುಮಾರು ಇಪ್ಪತೈದು ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಕಾಲಮ್ ಪೂಜೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮದ ಮುಖಂಡರು, ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಮುಂತಾದವರು ಸೇರಿ ಚಾಲನೆಯನ್ನು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ