Latest

ಲಾಕ್ ಡೌನ್ ಉಲ್ಲಂಘಿಸಿದವರ ಮೇಲೆ ಲಾಠಿ ಚಾರ್ಜ್

ಪ್ರಗತಿವಾಹಿನಿ ಸುದ್ದಿ; ರಾಯಚೂರು: ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಜಾರಿಯಲ್ಲಿದ್ದು, ಪ್ರತೀ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ನಿಯಮ ಉಲ್ಲಂಘಿಸಿ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಇದರಿಂದ ಬೇಸತ್ತ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಈ ತಿಂಗಳ ಅಂತ್ಯದ ವರೆಗೆ ಪ್ರತಿ ಭಾನುವಾರ ಲಾಕ್‍ಡೌನ್ ಘೋಷಿಸಲಾಗಿದೆ. ರಾಯಚೂರಿನಲ್ಲಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

Home add -Advt

ಜಿಲ್ಲೆಯಲ್ಲಿ ಅನಗತ್ಯವಾಗಿ ಜನರು ಬೈಕ್ ಗಳಲ್ಲಿ ರಸ್ತೆಗಿಳಿದಿದ್ದಾರೆ. ಲಾಕ್ ಡೌನ್ ಇದ್ದರೂ ರಸ್ತೆಗಿಳಿದ ಜನರ ಮೇಲೆ ಪೊಲೀಸರು ಲಾಠೀ ಚಾರ್ಜ್ ಮಾಡಿ ಬುದ್ದಿ ಹೇಳಿ ವಾಪಸ್ ಕಳುಹಿಸುತ್ತಿದ್ದಾರೆ. ಮಾಸ್ಕ್ ಹಾಕದೇ ಡಬಲ್, ತ್ರಿಬಲ್ ರೈಡಿಂಗ್ ಮಾಡುತ್ತಿದ್ದವರ ಬೈಕ್ ಸೀಜ್ ಮಾಡಿದ್ದಾರೆ.

Related Articles

Back to top button