ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ಸಡಿಲಿಕೆಯಾದ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 6,767 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 1,38,181ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು ಒಂದೇ ದಿನ ಮಾರಕ ಕೊರೋನಾಗೆ 147 ಮಂದಿ ಬಲಿಯಾಗಿದ್ದಾರೆ. ಇದರ ಪರಿಣಾಮ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 3867ಕ್ಕೆ ಏರಿಕೆಯಾಗಿದೆ.
ಜಗತ್ತಿನಾದ್ಯಂತ ಇದುವರೆಗೂ ಒಟ್ಟು 54, 01,222 ಜನರಿಗೆ ಕೋವಿಡ್-19 ಸೋಂಕು ಬಂದಿದೆ. ಜಾನ್ಸ್ ಹಾಪ್‌ಕಿನ್ಸ್ ಎಂಬ ಕೊರೋನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ಸೋಂಕಿಗೆ ಜಾಗತಿಕವಾಗಿ 3,43,799 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಅಮೆರಿಕಾವೊಂದರಲ್ಲೇ 98,683 ಜನ ಅಸುನೀಗಿದ್ದಾರೆ.
ಅಮೆರಿಕಾದಲ್ಲಿ ಅತೀಹೆಚ್ಚು ಜನರಲ್ಲಿ ಅದರೆ 16, 66,828 ಜನರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ಸದ್ಯ 11, 21,231 ಮಂದಿಗೆ ಮಾತ್ರ ಸಕ್ರಿಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಬ್ರೆಜಿಲ್ ನಲ್ಲಿ ಮಾರಕ ಕೊರೋನಾದಿಂದ ಬಳಲುತ್ತಿರುವವರ ಸಂಖ್ಯೆ 3,47,398ಕ್ಕೆ ತಲುಪಿದೆ. ಇದರಲ್ಲಿ 22,013 ಜನರು ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ