Latest

ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ವ್ಯಕ್ತಿ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ರಾಜ್ಯದಲ್ಲಿ ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಕ್ವಾರಂಟೈನ್ ನಲ್ಲಿರುವವರು ಕೊರೊನಾ ಭೀತಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಯೂ ಹೆಚ್ಚುತ್ತಿದೆ. ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯ ಬಾತ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ದಾವಣಗೆರೆಯ ಬಸಾಪುರ ನಿವಾಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರಲ್ಲಿ ಕೆಮ್ಮು, ಜ್ವರದಂತಹ ಲಕ್ಷಣಗಳು ಕಾಣಿಸಿಕೊಂಡಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ವ್ಯಕ್ತಿಯನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜೊತೆಗೆ ಮೇ 20ರಂದು ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರವುದಕ್ಕೂ ಮುನ್ನವೇ ಇಂದು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯ ಬಾತ್ ರೊಂನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button